Maranakatte - Shri Brahmalingeshwara Temple

ಮಾರಣಕಟ್ಟೆ - ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನ

ಉದ್ಯದ್ ಭಾಸ್ಕರಸನ್ನಿಭಂ ತ್ರಿನಯನಂ ನಾಗೇಂದ್ರ ಭೂಷೋಜ್ವಲಂ ಹಸ್ತೇ ರಕ್ತಕಪಾಲಖಡ್ಗಸಹಿತಂ ಶ್ವೇತಾಬ್ಜಢಕ್ಕಾಯುಧಮ್ |
ರಿಂಗಿತ್ ಕಿಂಕಿಣಿನೂಪುರಭ್ರಮಯುತಂ ಶೋಭಾಯುತಂ ಸಂಸ್ಥಿತಂ ಭೂತೇಶಂ ಚತುರಾನನಂ ಭಯಹರಂ ಬ್ರಹ್ಮಾಭಿಧಾನಂ ಭಜೇ || 
 

ದೇವಸ್ಥಾನದ ವಿಶೇಷ ಕಾರ್ಯಕ್ರಮ - ಉತ್ಸವಾದಿಗಳು :-

 

1. ಮಕರಸಂಕ್ರಮಣ(ಜಾತ್ರೆ)ನಂತರ ಎರಡು ದಿನ ಮಂಡಲ ಉತ್ಸವ (ಜನವರಿ)

2.ಕುಂಭ ಸಂಕ್ರಮಣ(ಕಿರುಜಾತ್ರೆ)(ಫೆಬ್ರವರಿ)
3. ವರ್ಷದ ಮೂರು ಕಾಲದಲ್ಲಿ ಚರುವಿನಪೂಜೆ (ವೃಷ್ಚಿಕ ಮಾಸ, ಮೇಷ ಮಾಸ, ಸಿಂಹ ಮಾಸ)
4.ಸಂಪ್ರೋಕ್ಷಣೆ (ಜಾತ್ರೆಯ ನಂತರ)
5. ಸೌರಮಾನ ಯುಗಾದಿ(ಮೇಷ ಸಂಕ್ರಮಣದ ಮರುದಿನ)
6. ಸಿಂಹಮಾಸದಲ್ಲಿ ಸೋಣೆ ಆರತಿ(1 ತಿಂಗಳು)
7. ನವರಾತ್ರಿಯಲ್ಲಿ ಕದಿರು ಕಟ್ಟುವುದು
8. ದೀಪಾವಳಿ
9. ದೀಪೋತ್ಸವ(ಕಾರ್ತಿಕ ಮಾಸ ಕೃಷ್ಣ ಚತುರ್ದಶಿ)

 

ವಾರ್ಷಿಕ ಉತ್ಸವ:


ದೇವರ ಉತ್ಸವವು ಮಕರ ಸಂಕ್ರಾಂತಿಯಂದು ಪ್ರತಿ ವರ್ಷ ನೆಡೆಯುತ್ತದೆ. ಸನ್ನಿಧಿಗೆ ಪ್ರೀತಿಯ ಹರಕೆಗಳಾದ ಯಕ್ಷಗಾನ ಬಯಲಾಟ, ರಂಗಪೂಜೆ, ಚರುವಿನ ಪೂಜೆ, ಹೂವಿನ ಪೂಜೆ, ಮಂಗಳಾರತಿ, ಹರಿವಾಣ ನೈವೇದ್ಯ ಮೊದಲಾದ ಪೂಜೆ ದೇವರಿಗೆ ಸಲ್ಲಿಸಿ ತಮ್ಮ ಇಷ್ಟಾರ್ಥವನ್ನು ನೇರವೇರಿಸಿಕೊಳ್ಳುತ್ತಿದ್ದಾರೆ. ಅಲ್ಲದೇ ಶ್ರೀ ದೇವರ ಸನ್ನಿಧಿಯಲ್ಲಿ ಶ್ರೀ ಯಕ್ಷೆ, ಹೈಗುಳಿ, ಚಿಕ್ಕು ದೇವತೆಗಳ ದರ್ಶನವಿದ್ದು ಈ ಮೈ ದರ್ಶನದಲ್ಲಿ ದೇವಸ್ಥಾನದ ಅನುವಂಶಿಕ ಮುಕ್ತೇಸರರ ಉಪಸ್ಥಿತಿಯಲ್ಲಿ ವಾಕ್ ತೀರ್ಮಾನ ಸಿಗುತ್ತದೆ. ಅಲ್ಲದೇ ತಮ್ಮ ಸಮಸ್ಯೆಗಳ ಪರಿಹಾರಕ್ಕೆ ಮಾರ್ಗದರ್ಶನ ಪಡೆಯುತ್ತಾರೆ.
ಈ ದೇವಸ್ಥಾನದಲ್ಲಿ ಪ್ರತಿ ವರ್ಷ ಮಕರ ಸಂಕ್ರಾಂತಿಯ 2 ವಾರದ ಮುನ್ನ ದೇವರ ವಿಗ್ರಹವನ್ನು ವಿಸರ್ಜನೆ ಮಡಿ ಮಕರ ಸಂಕ್ರಾಂತಿಯಂದು ಪುನರ್ ಪ್ರತಿಷ್ಟೆ ಮಾಡಲಾಗುತ್ತದೆ. ಮಕರ ಸಂಕ್ರಾಂತಿಯಂದು ಮಧ್ಯಾಹ್ನ 12.00 ಘಂಟೆಗೆ ಅಬಿಜನ್ ಮುಹೂರ್ತದಲ್ಲಿ ಮಹಾಮಂಗಳಾರತಿಯೊಂದಿಗೆ ವಾಷರ್ಿಕ ಉತ್ಸವ ಜರುಗುತ್ತದೆ. ಹಾಲಬ್ಬದಲ್ಲಿ ಘಂಟೆ 10.30ಕ್ಕೆ ಕೆಂಡಸೇವೆ ಜರುಗುತ್ತದೆ. ಕೆಂಡಸೇವೆ ಆದ ಕೂಡಲೇ ದೇವರ ಮುಖ ಮಂಟಪದಲ್ಲಿ ದರ್ಶನ ಪಾತ್ರಿಗಳು ಕುಳಿತು ಕೆಂಡ ಕಾಣಿಕೆ ಲೆಕ್ಕ ಮಾಡಿ ದೇವಸ್ಥಾನದ ಅರ್ಚಕರಿಗೂ, ಸೇವಕರಿಗೂ, ಮಾಗಣಿಯವರಿಗೂ, ಪ್ರಸಾದ ಹಂಚುವಾಗ ಬೆಳ್ಳಿ ಕಾಣಿಕೆ ಹಾಕಿ ಕೊಡುವುದು ಮಾಮೂಲು ಪದ್ಧತಿ. ಇದಾದ ಕೂಡಲೇ ದೇವಸ್ಥಾನದ ಮೂಡುಬಾಗಿಲಿನಲ್ಲಿ ಆಡಳಿತದಾರನು ಬ್ರಾಹ್ಮಣರಿಗೆ,ಬ್ರಾಹ್ಮಣೇತರರಿಗೆ ಧರ್ಮ ಮಾಡುವುದು ವಾಡಿಕೆ. ಇದಾದ ನಂತರ ದಶಾವತಾರ ಮೇಳದವರಿಂದ ಸೇವೆ ನೆಡೆಯುತ್ತದೆ. ಜನವರಿ 15ರ ಬೆಳಿಗ್ಗೆ 10.00 ಘಂಟೆಗೆ ಮಂಡಲ ಸೇವೆ ನೆಡೆಯುತ್ತದೆ. ಅಲ್ಲದೇ ಚಿಕ್ಕು ದರ್ಶನದಲ್ಲಿ ಪಡುದಿಕ್ಕಿನಲ್ಲಿ ಕಡಕಟ್ಟುವಿನಲ್ಲಿ ಕುಳಿತು ಮುಕ್ತೇಸರರ ಉಪಸ್ಥಿತಿಯಲ್ಲಿ ಸನ್ನಿಧಾನದಿಂದ ನಂಬಿದ ಗಣಕ್ಕೆ ಪುಷ್ಪ ಕೊಡುವುದು ವಿಶೇಷ. ಅಲ್ಲದೇ ತುಲಾಭಾರ ಸೇವೆ ನೆಡೆಯುತ್ತದೆ. ಜನವರಿ 16ರಂದು ಬೆಳಗ್ಗೆ 10.00ಘಂಟೆಗೆ ಮಂಡಲ ಸೇವೆ ಆದ ನಂತರ ತುಲಾಭಾರ ಸೇವೆ ನೆಡೆಯುತ್ತದೆ. ನಂತರ ಪ್ರಸಾದ ವಿತರಣೆ ರಾತ್ರಿ ಕಡಬಿನ ಪೂಜೆ . ಜಾತ್ರೆಯಾದ ಒಂದು ವಾರದಲ್ಲಿ ಸಂಪ್ರೋಕ್ಷಣೆ. ಅಲ್ಲದೇ ಆಡಳಿತದಾರನ ಮನೆಯಲ್ಲಿ ಮೂರುದೇವರ ದರ್ಶನ ಉಂಟು ಮಾಡಿ ಅಲ್ಲಿ ಹಬ್ಬದಲ್ಲಿ ಕೆಲಸ ಮಾಡಿದ ಸಿಬ್ಬಂದಿಯವರಿಗೆ ಸಂಬಳ ಬಟವಾಡೆ ಮಾಡುವುದು ವಾಡಿಕೆ. ಅಲ್ಲದೇ ಬ್ರಾಹ್ಮಣರಿಗೂ, ಕುಟುಂಬದ ಸದಸ್ಯರಿಗೂ ಕಾಣಿಕೆ ನೀಡುವುದು ಮಾಮೂಲು ಪದ್ಧತಿ

 

ದೀಪೋತ್ಸವ:-


ಕಾರ್ತಿಕ ಮಾಸ ಕೃಷ್ಣ ಚತುರ್ದಶಿಯಂದು ದೇವಸ್ಥಾನದಲ್ಲಿ ದೀಪೋತ್ಸವ. ದೇವಸ್ಥಾನದ ಆದಿ ದೇವಸ್ಥಾನ ವೆಂಕಟರಮಣ ದೇವಸ್ಥಾನದಿಂದ ಈ ದೇವಸ್ಥಾನದವರೆಗೆ ದೀಪಾಲಂಕೃತಗೊಳಿಸಲಾಗುತ್ತದೆ. ದೇವಸ್ಥಾನದ ಎದುರು ಶೇಡಿಮರ.ಈ ದೇವಸ್ಥಾನಕ್ಕೆ ಸಂಬಂಧಪಟ್ಟಂತೆ ಯಾವುದೇ ರಕ್ತಾಹರ ಇರುವುದಿಲ್ಲ.ಮೇಷ ಮಾಸ, ಸಿಂಹ ಮಾಸ, ವೃಶ್ಚಿಕ ಮಾಸಗಳಲ್ಲಿ ಚರುವಿನ ಪೂಜೆ , ಸೋಣೆ ತಿಂಗಳು ಸಿಂಹ ಮಾಸದಲ್ಲಿ ಸೋಣೆ ಆರತಿ ನೆಡೆಯುತ್ತದೆ.
ಕುಂಭ ಸಂಕ್ರಮಣದಂದು ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸೇರಿ ತಮ್ಮ ವಾಕ್ ತೀಮರ್ಾನಗಳನ್ನು ದೇವರದರ್ಶನದಲ್ಲಿ ಮಾಡಿಕೊಂಡು ಹೋಗುವುದು ವಿಶೇಷ. ವಶ್ಚಿಕ ಸಂಕ್ರಮಣದ ಮರುದಿನ ದೇವರ ತಾರಂಕುಲಕ್ಕೆ ಅನುಸಾರವಾಗಿ ದೇವಸ್ಥಾನದ ವತಿಯಿಂದ ದಶಾವತಾರ ಯಕ್ಷಗಾನ ಮೇಳ ಪ್ರಾರಂಭವಾಗಿ ಈ ಕ್ಷೇತ್ರದಲ್ಲಿ ಪ್ರಥಮ ಸೇವೆ ನೆಡೆಯುತ್ತದೆ. ಅದರ ಮರುದಿನ ಆಡಳಿತದಾರನ(ಗುಡಿಕೇರಿ) ಮನೆಯಲ್ಲಿ ಸೇವೆ ಆಟ ನೆಡೆಯುವುದು ಸ್ಥಳ ಪದ್ಧತಿ. ವೆಂಕಟರಮಣ ದೇವಸ್ಥಾನದಲ್ಲಿ ಸಿಂಹ ಮಾಸ, ಶುಕ್ಲ ಪಕ್ಷದ ಶ್ರಾವಣ ನಕ್ಷತ್ರದಂದು ಸೌರ ಋಗ್ ಉಪಕರ್ಮ ಆಚರಣೆ ಮಾಡಿ ನಂತರ ಅಲ್ಲಿ ಪೂಜಿಸಲ್ಪಟ್ಟ ಉಪವೀತವನ್ನು ಬ್ರಹ್ಮಲಿಂಗೇಶ್ವರ ದೇವರಿಗೆ ಹಾಕುವುದು ವಾಡಿಕೆ.